ನಾವೂರು: ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆ.29ರಂದು 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಉಪವಲಯ ಅರಣ್ಯ ಅಧಿಕಾರಿ ಅಶೋಕ್ ಅಧ್ಯಕ್ಷತೆಯಲ್ಲಿ ನಡೆಯಿತು.
ವಿಶೇಷ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಗಣೇಶ್ ಗೌಡ, ಹರೀಶ್ ಸಾಲಿಯಾನ್, ವೇದಾವತಿ , ಶಾಂತಿ, ಎನ್.ಕೆ.ಹಸೈನಾರ್, ಬಾಲಕೃಷ್ಣ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಾಜೀವ್ ಸಾಲಿಯಾನ್, ತಾಂತ್ರಿಕ ಸಹಾಯಕ ಅಭಿಯಂತರಾದ ರೇಷ್ಮಾ, ಐಇಸಿ ಸಂಯೋಜಕಿ ವಿನೀಶಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಗೌಡ ಸ್ವಾಗತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ ವಂದಿಸಿದರು.