ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆ.29ರಂದು ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯನಿ ಹೇಮಲತಾ ಎಂ.ಆರ್. ಮೇಜರ್ ಧ್ಯಾನ್ ಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀವನ ಮತ್ತು ಸಾಧನೆಯ ಕುರಿತು ವಿದ್ಯಾರ್ಥಿನಿ ಸ್ವಿತಾರವರು ಮಾಹಿತಿ ನೀಡಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಬಗ್ಗೆ ವಿದ್ಯಾರ್ಥಿನಿ ನಿಧಿ ಮಾಹಿತಿ ನೀಡಿದರು.

ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಎನ್. ಉಪಸ್ಥಿತರಿದ್ದರು.ಸಿಂಚನ ಸ್ವಾಗತಿಸಿ, ಹ್ಯಾಪಿ ವಂದಿಸಿದರು. ಸಹಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿದರು.

LEAVE A REPLY

Please enter your comment!
Please enter your name here