ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳನ್ನು ರೂಪಿಸುವಲ್ಲಿ ಯಕ್ಷಗಾನ ಸಹಕಾರಿಯಾಗುತ್ತದೆ ಎಂದು ಯಕ್ಷದ್ರುವ ಪಟ್ಟಣ ಫೌಂಡೇಶನ್ ಬೆಳ್ತಂಗಡಿ ಘಟಕದ ಗೌರವ ಸಲಹೆಗಾರ ಭುಜಬಲಿ ಧರ್ಮಸ್ಥಳ ಹೇಳಿದರು.
ಅವರು ಮಂಗಳೂರು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಯಕ್ಷದ್ರುವ-ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನದಲ್ಲಿ ನೃತ್ಯ ಅಭ್ಯಾಸದೊಂದಿಗೆ ಸಿಗುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಜ್ಞಾನ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎನ್ ಅಧ್ಯಕ್ಷತೆ ವಹಿಸಿದ್ದರು. ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್, ಕೋಶಾಧಿಕಾರಿ ಆದರ್ಶ್, ಯಕ್ಷಗಾನ ಗುರುಗಳಾದ ದೇವಿ ಪ್ರಸಾದ್ ಗುರುವಾಯನಕೆರೆ ಉಪಸಿತರಿದ್ದರು.
ವಾಣಿ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.