ಬೆಂಗಳೂರು: ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿ ಸಹಿತ ಮೂರು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಸೆಷನ್ಸ್ ಕೋರ್ಟ್‌ನ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ, ಪ್ರಕರಣದ ಮರುತನಿಖೆ ಕೋರಿ ಸೌಜನ್ಯಾಳ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿ ಹಾಗೂ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಲಾಗಿದೆ.
ನ್ಯಾಯಾಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ.ಖಾಜಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ.
p>