Site icon Suddi Belthangady

ಧರ್ಮಸ್ಥಳ: ಶ್ರೀ ಧ.ಮಂ.ಆಂ. ಮಾ. ಶಾಲೆಯಲ್ಲಿ ನಿಡ್ಲೆ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಿಡ್ಲೆ ವಲಯದ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು.ಕಾರ್ಯಕ್ರಮವನ್ನು ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಯುದ್ಧಕಾಲೆ ಶಸ್ತ್ರಾಭ್ಯಾಸಂ ಎನ್ನುವಂತೆ ಮಾಡದೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಮೊದಲೇ ಕಂಡುಹಿಡಿಬೇಕು, ಬಳಿಕ ಅವರನ್ನು ಬೇಕಾದ ಹಾಗೆ ತಿದ್ದಿ-ತೀಡಿ ಅನುರಣಿಸಬೇಕು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾಗಿರುವ ಶ್ರೀಮತಿ ತಾರಕೇಸರಿಯವರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ಪ್ರತಿಭಾಕಾರಂಜಿಯ ಅಗತ್ಯತೆಗಳ ಕುರಿತು ವಿಚಾರ ಹಂಚಿಕೊಂಡರು. ಪ್ರಾಸ್ತಾವಿಕವಾಗಿ ಮಾತನಾಡಿದ ನಿಡ್ಲೆ ವಲಯದ ಸಂಪನ್ಮೂಲ ವ್ಯಕ್ತಿಗಳಾಗಿರುವ ಪ್ರತಿಮಾ ಇವರು ಕಾರ್ಯಕ್ರಮದ ರೂಪರೇಷೆಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಧರ್ಮಸ್ಥಳ ಗ್ರಾಮ ಪಂಚಾಯತ್ನ ಅಧ್ಯಕ್ಷೆ ವಿಮಲಾ ಪ್ರತಿಭಾ ಕಾರಂಜಿಯ ಅಗತ್ಯತೆ ವಿದ್ಯಾರ್ಥಿಗಳಿಗೆ ಏಕೆ ಬೇಕು ಎಂಬುದನ್ನು ವಿವರಿಸಿ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಪಂಚಾಯತ್ನ ಸದಸ್ಯರುಗಳಾಗಿರುವ ಸುಧಾಕರ್ ಹಾಗೂ ಸುನಿತಾ ಭಾಗವಹಿಸಿದ್ದರು. ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮ ಚಂದಗಾಣಿಸಿದರು.

ಶಾಲಾ ಸಹ ಶಿಕ್ಷಕಿ ಆಶಾ ಕುಮಾರಿ ಪಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನ ಪರಿಮಳ ಎಂವಿ ಸ್ವಾಗತಿಸಿ, ಸಹ ಶಿಕ್ಷಕಿ ದಿವ್ಯ ಏನ್ ಧನ್ಯವಾದವಿತ್ತರು. ಈ ಕಾರ್ಯಕ್ರಮದಲ್ಲಿ ನಿಡ್ಲೆ ವಲಯದ ವಿವಿಧ ಶಾಲಾ ಮುಖ್ಯೋಪಾಧ್ಯಾಯರುಗಳು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Exit mobile version