ಬೆಳ್ತಂಗಡಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆ.02ರಂದು ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದ್ದು ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಉಪನೋಂದಣಾಧಿಕಾರಿ ಕಛೇರಿಗೂ ವಿಸ್ತರಿಸಲಾಗಿದೆ.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ಉಪನೋಂದಣಿ ಕಛೇರಿಯಲ್ಲಿ ಮಾತ್ರ ದಸ್ತಾವೇಜು ನೋಂದಣಿ ಮಾಡಲು ಅವಕಾಶವಿದೆ. ಇನ್ನು ಮುಂದೆ ಸೆ.02ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯಲ್ಲಿ ದಸ್ತಾವೇಜುನ್ನು ಜಿಲ್ಲೆಯ ಯಾವುದೇ ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ಉಪನೋಂದಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.