

ಪೆರಿಂಜೆ: ಸ್ವಾಗತ್ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟವು ಪೆರಿಂಜೆ ಪಜಂಬಾಡಿ ಕ್ರೀಡಾoಗಣದಲ್ಲಿ ಜರಗಿತು.
ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯ ಹರಿಪ್ರಸಾದ್ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಹೊಕ್ಕಾಡಿಗೋಳಿ ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯೆ ಶಾಂತ, ಹಿರಿಯರಾದ ಬೂಬ ಬಡಕೋಡಿ, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಸಂಗಮ್ ಪೇರಿ, ಬಿಜೆಪಿ ಎಸ್.ಸಿ.ಮೋರ್ಚಾ ಬೆಳ್ತಂಗಡಿ ಮಂಡಲದ ಉಪಾಧ್ಯಕ್ಷ ಸುರೇಶ್ ಆರಂಬೋಡಿ, ಸ್ವಾಗತ್ ಫ್ರೆಂಡ್ಸ್ ನ ಅಧ್ಯಕ್ಷರು ರಘುನಾಥ್ ಪಜಂಬಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ವಿಠಲ ಸಿ ಪೂಜಾರಿ, ಆನಂದ ಪೂಜಾರಿ, ಕೋಡಿoಗೇರಿ, ಮಾಜಿ ತಾ.ಪಂ. ಸದಸ್ಯ ಓಬಯ್ಯ ಆರಂಬೋಡಿ, ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಸುಧಾಕರ ಪೂಜಾರಿ, ಅವಿನಾಶ್ ಕುರ್ಲೊಟ್ಟು, ಗುರುಪ್ರಸಾದ್ ಮಲಿಯಾಲಪಲ್ಕೆ, ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.
ಪ್ರವೀಣ್ ಸೂರ್ಯ ಹೊಸಂಗಡಿ ಕಾರ್ಯಕ್ರಮ ನಿರೂಪಿಸಿ, ದಿನೇಶ್ ಪಟ್ಟಾಡಿ ಸ್ವಾಗತಿಸಿ, ಅನಿಲ್ ಕುಮಾರ್ ಪಜಂಬಾಡಿ ಧನ್ಯವಾದ ನೀಡಿದರು.