Site icon Suddi Belthangady

ಸೆ.8: ಪುದುವೆಟ್ಟು ಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ

ಪುದುವೆಟ್ಟು: ಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಪ್ರಯುಕ್ತ ಸೆ.8ರಂದು ಬೆಳಿಗ್ಗೆ ಗಂಟೆ 9.00ಕ್ಕೆ ಸಂಘದ ವಠಾರದಲ್ಲಿ ಗುರುಪೂಜೆ ಶಾಜು ಕೆ.ಆರ್.ರವರ ನೇತೃತ್ವದಲ್ಲಿ ನಡೆಯಲಿರುವುದು.

ಬೆಳಿಗ್ಗೆ 10.00ರಿಂದ ಪುರುಷರಿಗೆ ಮುಕ್ತ ವಾಲಿಬಾಲ್ ಪಂದ್ಯಾಟ, ಪುರುಷರಿಗೆ ಮತ್ತು ಮಹಿಳೆಯರಿಗೆ ಮುಕ್ತ ಹಗ್ಗ ಜಗ್ಗಾಟ ಮಕ್ಕಳಿಗೆ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಗುವುದು. ಸ.ಹಿ.ಪ್ರಾ. ಶಾಲೆ ಕೆಮ್ಮಟೆ ಮತ್ತು ಮಿಯ್ಯಾರು ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಕ ಬಹುಮಾನ ವಿತರಣೆ ನಡೆಯಲಿದೆ ಎಂದು ಪ್ರ.ಕಾರ್ಯದರ್ಶಿ ವಿನೀಶ್ ಹಾಗೂ ಅಧ್ಯಕ್ಷ ಸಂತೋಷ್ ಕೆ.ಸಿ. ಕೂಡುದಕಲಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version