ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಸೆ.9ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಎ. ಉದ್ಘಾಟನೆಯನ್ನು ಮಾಡಲಿದ್ದಾರೆ.
ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟರ್‌ನ ಮಾಲಕ ಕೆ.ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಾರ್ಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನೀಲು, ಚಾರ್ಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ.ಉಪಸ್ಥಿತರಿರಲಿದ್ದಾರೆ.