ಪುದುವೆಟ್ಟು: ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಶಿಲಾನ್ಯಾಸ ಸಮಾರಂಭ

0

ಪುದುವೆಟ್ಟು: ಜೈನ ಧರ್ಮವು ಜಗತ್ತಿನ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದು ಜೈನ ಧರ್ಮದ ತತ್ವ ಸಿದ್ಧಾಂತಗಳು ವೈಜ್ಞಾನಿಕ ಹಿನ್ನೆಲೆಯಲ್ಲಿದೆ ಜೈನ ಧರ್ಮೀಯರಲ್ಲಿ ಜೈನ ಧರ್ಮದ ಪ್ರಜ್ಞೆ ಉಳಿಸಿ ಬೆಳೆಸುವಲ್ಲಿ ಜಿನಚೈತ್ಯಾಲಯಗಳು ಪೂರಕ ಮತ್ತು ಪ್ರೇರಕ ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ| 1008 ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯು ಪಾಳುಬಿದ್ದಿತ್ತು ಈದೀಗ ಈ ಸೀಮೆಯ ಜೈನ ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದಿವ್ಯ ಮಾರ್ಗದರ್ಶನ ಮತ್ತು ಆಶೀರ್ವಾದದೊಂದಿಗೆ ಮತ್ತು ಬಸದಿಗೆ ಸಂಬಂಧಪಟ್ಟ ಎಲ್ಲಾ ಮನೆತನಗಳು ಸೇರಿಕೊಂಡು ಜೀರ್ಣೋದ್ಧಾರ ನಡೆಸಲು ತೀರ್ಮಾನಿಸಿದ್ದು ಇದರ ಶಿಲಾನ್ಯಾಸ ಸಮಾರಂಭ ಆ.28ರಂದು ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಇವರ ಹಸ್ತದಿಂದ ಶಿಲಾನ್ಯಾಸ ಮತ್ತು ವಾಸ್ತು ತಜ್ಞ ಪಾದೂರು ಸುದರ್ಶನ್ ಇಂದ್ರ ಇವರ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ನಿಡ್ವಾಳ ಬಸದಿಗೆ ಸೇರಿರುವ ಎಲ್ಲಾ ಊರ ಪರವೂರ ಶ್ರಾವಕ ಶ್ರಾವಕೀಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here