ಬೆಳ್ತಂಗಡಿ: ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ ಶಿಪ್-2024ಕ್ಕೆ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡವನ್ನು ಪ್ರತಿನಿಧಿಸಿದ ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನಗಳಿಸಿ ಹೊರ ಹೊಮ್ಮಿದೆ.
ನೇಪಾಳದ ಪೋಖರ ರಂಗಶಾಲಾದಲ್ಲಿ ಆ.31, ಸೆ.1,2ರಂದು ನಡೆದ ಪಂದ್ಯಾಟದಲ್ಲಿ ಭಾಗವಹಿಸಿದ ಪುರುಷ ಮತ್ತು ಮಹಿಳೆಯರ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡ ಪ್ರಥಮ ಸ್ಥಾನಗಳಿಸಿ ಜಯಶಾಲಿಯಾಗಿದೆ.
ಮಿಂಚಿದ ತಾಲೂಕಿನ ಕ್ರೀಡಾಪಟುಗಳು: ಪುರುಷರ ತಂಡದಲ್ಲಿ ವೈಯಕ್ತಿಕ ನೆಲೆಯಲ್ಲಿ ತಂಡ ನಾಯಕ ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನ ಕೆ. ಮತ್ತು ಮಂಜುನಾಥ್ ಗೌಡ ದಂಪತಿಯ ಪುತ್ರ ಯೂನಿತ್ ಕೆ. ಉತ್ತಮ ಅಲ್ ರೌಂಡರ್ ಪ್ರಶಸ್ತಿ ಪಡೆದರು. ಇಳಂತಿಲ ಗ್ರಾಮದ ನೆಲ್ಲಿಪಲ್ಲಿಕೆ ನಿವಾಸಿ ಧನಂಜಯ ಗೌಡ ಮತ್ತು ಭಾರತಿ ದಂಪತಿಯ ಪುತ್ರ ರೋಹಿತ್ ಉತ್ತಮ ಎಸೆತಗಾರ ಪ್ರಶಸ್ತಿ ಮಡಿಗೇರಿಸಿಕೊಂಡರು. ಮಡಂತ್ಯಾರಿನ ಸೇಬಾಸ್ಟಿನ್ ವೇಗಸ್ ಹಾಗೂ ಲೀನಾ ವೇಗಸ್ ದಂಪತಿಯ ಪುತ್ರ ಶಾನ್ ವೇಗಸ್ ಹಾಗೂ ಅಚ್ಚುತ ಮತ್ತು ಗಿರಿಜಾ ರವರ ಪುತ್ರ ಅವಿನಾಶ್ ಉತ್ತಮ ಪ್ರದರ್ಶನ ನೀಡಿದರು. ಪ್ರಜ್ವಲ್, ಕರಿಯಪ್ಪ, ದಿಕ್ಷೀತ್, ರವಿ ವರ್ಧನ್, ರಕ್ಷಿತ್, ಪೆಮ್ಮೆಯ್ಯ ಹಾಗೂ ದರ್ಶನ್ ತಂಡದಲ್ಲಿದ್ದರು.
ಮಿಂಚಿದ ಮಡಂತ್ಯಾರಿನ ಡಾಫ್ನಿ ವೆರೋನಿಕ: ಮಹಿಳೆಯರ ತಂಡವನ್ನು ಪ್ರತಿನಿಧಿಸಿದ ಮಡಂತ್ಯಾರಿನ ಕ್ಲೋಡ್ ಫ್ರಾನ್ಸಿಸ್ ಮಿಸ್ಕ್ಯುತ್ ಹಾಗೂ ಡಯಾನ ಮಿಸ್ಕ್ಯುತ್ ದಂಪತಿ ಪುತ್ರಿ ಡಾಫ್ನಿ ವೆರೋನಿಕ ಉತ್ತಮ ಅಲ್ ರೌಂಡರ್ ಪ್ರಶಸ್ತಿಗೆ ಬಾಜಿನರಾದರು. ತಂಡದ ನಾಯಕಿ ಸುಪ್ರಿಯಾ ಎಸ್.ಪಿ. ಉತ್ತಮ ಎಸೆತಗಾರ ಪ್ರಶಸ್ತಿ ಪಡೆದರು. ಇವರು ಬಂಟ್ವಾಳ ತಾಲೂಕಿನ ಕಸಬಾ ಕೆತ್ತಿಮಾರಿನ ನಿವಾಸಿ ಶೀನಾಥ್ ಸಿ. ಹಾಗೂ ಪೂರ್ಣಿಮಾ ದಂಪತಿಗಳ ಪುತ್ರಿ. ಸಿಂಚನ, ಭೂಮಿಕಾ, ಉಷಾ, ಭವನಾ ಹಾಗೂ ಗಾನಾವಿ ಉತ್ತಮ ಪ್ರದರ್ಶನ ನೀಡಿದರು. ಎರಡು ತಂಡಗಳಿಗೆ ಕೊಡಗಿನ ವೀರಾಜಪೇಟೆಯ ರೈಶಿಂಗ್ ಸ್ಟಾರ್ ಕೋಚಿಂಗ್ ಸೆಂಟರ್‌ನ ಶಿಬಿರದಲ್ಲಿ ತರಬೇತಿ ಪಡೆದಿದ್ದರು.