Site icon Suddi Belthangady

ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭ ಸೆ.3ರಂದು ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಅಯೋಧ್ಯೆಯ ಕೇಶವದಾಸ್ ಮಹಾರಾಜ್, ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಒಳನಾಡು ಸಚಿವ ಮಾಂಕಾಳ್ ಎಸ್.ವೈದ್ಯ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಭಟ್ಕಳ ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಕೃಷ್ಣ ನಾಯ್ಕ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಶ್ರೀ ರಾಮ ಕ್ಷೇತ್ರ ಸಮಿತಿ ತಾಲೂಕು ಪ್ರಧಾನ ಸಂಚಾಲಕ ಜಯಂತ ಕೋಟ್ಯಾನ್, ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಹೊನ್ನಾವರ ಶ್ರೀ ರಾಮ ಕ್ಷೇತ್ರ ಸಮಿತಿ ಅಧ್ಯಕ್ಷ ವಾಮನ ನಾಯ್ಕ ಮಂಕಿ, ಭಟ್ಕಳ ಅರಸಕೇರಿ ವೆಂಕಟ್ರಮಣ ದೇವಸ್ಥಾನದ ಅಧ್ಯಕ್ಷ ಅರುಣ್ ನಾಯ್ಕ, ಶಾರದಾಹೊಳೆ ನಾಮಧಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆರ್.ಕೆ.ನಾಯ್ಕ್, ಹಳೆಕೋಟೆ ಹನುಮಂತ ದೇವಸ್ಥಾನದ ಧರ್ಮದರ್ಶಿ ಸುಬ್ರಾಯ ನಾಯ್ಕ್, ಕುಮಟ ಶ್ರೀ ರಾಮ ಕ್ಷೇತ್ರ ಸಮಿತಿ ಅಧ್ಯಕ್ಷ ಆರ್.ಜಿ.ನಾಯ್ಕ್, ಮಂಗಳೂರು ಕಾರ್ಪೋರೇಟರ್ ಕಿರಣ್ ಕುಮಾರ್, ಬೇಬಿ ಕುಂದರ್ ಬಂಟ್ವಾಳ, ಸಂಜೀವ ಪೂಜಾರಿ ಬಿರ್ವ ಸೆಂಟರ್, ಮೊದಲವರು ಉಪಸ್ಥಿತರಿದ್ದರು.

ಮಠದ ಟ್ರಷ್ಟಿ ತುಕಾರಾಮ್ ಸಾಲಿಯಾನ್ ಸ್ವಾಗತಿಸಿ, ಶ್ರೀ ರಾಮ ಕ್ಷೇತ್ರ ಸಮಿತಿ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಪೂಜಾರಿ ಕೆಲ್ಲಡ್ಕ ನಿರೂಪಿಸಿದರು.

Exit mobile version