Site icon Suddi Belthangady

ಲಾಯಿಲ: ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ವತಿಯಿಂದ 33ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ- ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ ಇದರ ವತಿಯಿಂದ 33ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವು ಆ.26ರಂದು ಸಂಭ್ರಮದಿಂದ ನಡೆಯಿತು.ಸಮಾರೋಪ ಸಮಾರಂಭದಲ್ಲಿ ಧಾರ್ಮಿಕ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿದ ನಡ ಪೌಢ ಶಾಲಾ ಅರ್ಥ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ವಸಂತಿ.ಜಿ.ಭಟ್ ಕುಳಮರ್ವ ಅವರು, “ಸಾಮಾಜಿಕ ಚಿಂತನೆಗಳೊಂದಿಗೆ ಆಚರಿಸುವ ಧಾರ್ಮಿಕ ಹಬ್ಬ ಅಥವಾ ಕಾರ್ಯಕ್ರಮಗಳು ಅರ್ಥಪೂರ್ಣ ಹಾಗೂ ಬಹಳ ಮಹತ್ವವನ್ನು ಪಡೆಯುತ್ತದೆ. ಅದಕ್ಕೆ ಸಾಕ್ಷಿ ಪಡ್ಲಾಡಿ ಮೊಸರು ಕುಡಿಕೆ ಕಾರ್ಯಕ್ರಮವಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ರಾಜೇಶ್ವರಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಕುಮಾರಿ ಚಂದ್ರಿಕಾ ಅವರನ್ನು ಸನ್ಮಾನಿಸಲಾಯಿತು.ಬೆಳಗ್ಗೆ ಕ್ರೀಡಾಕೂಟವನ್ನು ಆನಂದ ಪೂಜಾರಿ, ಜೋಕಿಂ ಸಿಕ್ವೇರಾ, ಗ್ರಾ.ಪಂ ಅಧ್ಯಕ್ಷೆ ಜಯಂತಿ ಎಂ.ಕೆ. ಸದಸ್ಯೆ ಜಯಂತಿ ಅನ್ನಡ್ಕ, ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಗಿರಿಧರ ಪೂಜಾರಿ, ಉತ್ಸಾಹಿ ಯುವಕ ಮಂಡಲದ ಅಧ್ಯಕ್ಷ ಹರ್ಷಿತ್.ಎಲ್. ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಗೂ ಊರವರಿಗೆ ವಿವಿಧ ರೀತಿಯ ಕ್ರೀಡಾಕೂಟ ನಡೆಯಿತು. ಸಂಜೆ ಸಭಾ ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ರವಿಚಂದ್ರ ನಾಡೆಂಜ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ಶುಭ ಹಾರೈಸಿದರು.

ವೇದಿಕೆಯಲ್ಲಿ ಅಂಬೇಡ್ಕರ್ ಉಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ನೆನಪು ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಪ್ರಸ್ತಾವಿಸಿ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ಅನಿಲ್ ವಿಕ್ರಂ ಡಿಸೋಜಾ, ಕೋಶಾಧಿಕಾರಿ ಸಂತೋಷ್ ಸಿಕ್ವೆರಾ ಹಿಮರಡ್ಡ, ಸೇರಿದಂತೆ ಪದಾಧಿಕಾರಿಗಳು ಸದಸ್ಯರು, ಊರವರು ಸಹಕರಿಸಿದರು. ಕ್ರೀಡಾಕೂಟ ಹಾಗೂ ಸಭಾ ಕಾರ್ಯಕ್ರಮವನ್ನು ಜಯಾನಂದ ಅಂಕಾಜೆ ಹಾಗೂ ವಿನಯ್ ಎಂ.ಎಸ್. ನಿರ್ವಹಿಸಿದರು.

Exit mobile version