ನಿಡ್ಲೆ: ಶ್ರೀ ಸತ್ಯನಾರಾಯಣ ಭಜನಾ ಮಂಡಳಿನಿರಪಾದೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ಬರೆಂಗಾಯ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಭಜನಾ ಮಂಡಳಿ ಆವರಣದಲ್ಲಿ ನೆರವೇರಿತು ಊರಿನ ಜನರಿಗೆ ವಿವಿಧ ಕ್ರೀಡಾ ಕೂಟ ಸ್ಪರ್ಧೆಗಳು ನೆರವೇರಿತು. ಸಂಜೆ ನಡೆದ ಸಮಾರೋಪ ಸಮಾರಂಭ ಶಿಶಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಧಾರ್ಮಿಕ ಭಾಷಣವನ್ನು ಅನಾರು ದುರ್ಗಾಪರಮೇಶ್ವರಿ ದೇವಳದ ಪ್ರಧಾನ ಅರ್ಚಕ ಗುರುಪ್ರಸಾದ್ ನಿಡ್ವಣ್ಣಾಯ ನಡೆಸಿದರು.ಮುಖ್ಯ ಅತಿಥಿಗಳಾಗಿ ಕಳೆಂಜ ಉಪವಲಯ ಅರಣ್ಯ ಅಧಿಕಾರಿ ಭರತ್ ಬರಂಗಾಯ ಪ್ರಗತಿ ಬಂತು ಒಕ್ಕೂಟದ ಅಧ್ಯಕ್ಷ ಮಾದಪ್ಪ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ನಿರ್ದೇಶಕ ಚಂದ್ರಶೇಖರ ಕೆ, ನಿಡ್ಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ಯಾಮಲ, ಕಳೆಂಜ ಗ್ರಾಮ ಪಂಚಾಯತ್ ಸದಸ್ಯೆ ಮಮತಾ, ಕಳೆಂಜ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮಂಜುನಾಥಗೌಡ ಹಾರಿತ್ತಕಜೆ, ಸತ್ಯನಾರಾಯಣ ಭಜನಾ ಮಂಡಳಿ ಗೌರವಾಧ್ಯಕ್ಷ ಮಾಲಿಂಗ ಗೌಡ, ಅಧ್ಯಕ್ಷ ಜನಾರ್ಧನ, ಹಿರಿಯ ಯಕ್ಷಗಾನ ಕಲಾವಿದ ಉಮೇಶ್ ಹೆಬ್ಬಾರ್ ಭಾಗವಹಿಸಿದ್ದರು.
ಜಯಂತ್ ಕಾಟ್ಲಾ, ದಿನೇಶ್ ಕರ್ಮಾಜೆ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು. ಸ್ವಾಗತವನ್ನು ವೀಣಾ, ನಿರೂಪಣೆಯನ್ನು ಕಿರಣ್, ಧನ್ಯವಾದವನ್ನು ಕೇಶವ ನೆರವೇರಿಸಿದರು.