Site icon Suddi Belthangady

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ- ಕೊರಂಜ ಶಾಲೆ ಬಾಲಕರ ವಿಭಾಗದಲ್ಲಿ ಪ್ರಥಮ- ಬಾಲಕಿಯರ ವಿಭಾಗದಲ್ಲಿ ದ್ವಿತೀಯ

ಗೇರುಕಟ್ಟೆ: ಪಟ್ಟೂರಿನಲ್ಲಿ ನಡೆದ ಪ್ರಾಥಮಿಕ ಶಾಲಾ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕೊರಂಜ ಸರಕಾರಿ ಹಿ.ಪ್ರಾ. ಶಾಲಾ ಬಾಲಕರು ಪ್ರಥಮ ಸ್ಥಾನವನ್ನು ಗಳಿಸಿದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷ ಕ ರವಿರಾಜ್ ಮತ್ತು ಭಾಗವಹಿಸಿದ್ದ ಬಾಲಕ, ಬಾಲಕರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.

Exit mobile version