Site icon Suddi Belthangady

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಇಂಟರಾಕ್ಟಿವ್ ಕರಿಯರ್ ಕಾರ್ಯಗಾರ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೆ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಎಸ್.ಡಿ.ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ ಇಂಟರಾಕ್ಟಿವ್ ಕರಿಯರ್ ಕಾರ್ಯಗಾರ ನಡೆಯಿತು.

ಎಸ್.ಡಿ.ಎಮ್.ಇ ಸೊಸೈಟಿ ಸಹಯೋಗದಲ್ಲಿ ನಡೆದ ಕಾರ್ಯಗಾರವನ್ನು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಡಾ. ಸತೀಶ್ಚಂದ್ರ ಎಸ್ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಅಧಿವೇಶನವು CAFY ಮತ್ತು ಸೂಪರ್ ಮೆಗಾ ಕೆರಿಯರ್ ಕೌನ್ಸೆಲಿಂಗ್ ಕಾರ್ಯಕ್ರಮದ ಭಾಗವಾಗಿತ್ತು, ಸಂಪನ್ಮೂಲ ವ್ಯಕ್ತಿಗಳಾದ CA ಗೌತಮ್ ಪೈ ಮತ್ತು CA ನಂದನ್ ರಾವ್ ಅವರು ವಿಷಯದ ಕುರಿತು ಮಾಹಿತಿಯನ್ನು ನೀಡಿದರು.

ಈ ಅಧಿವೇಶನವು ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆನ್ಸಿ ಕ್ಷೇತ್ರದಲ್ಲಿ ವೃತ್ತಿ ಅವಕಾಶಗಳ ಬಗ್ಗೆ ಮೌಲ್ಯಯುತವಾದ ಒಳನೋಟಗಳನ್ನು ಒದಗಿಸಿತು.

ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ್ ಹೆಗ್ಡೆ, ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಲರಾದ ಡಾ. ಪ್ರಮೋದ್ ಕುಮಾರ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಜೈನ್ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಇವರು ಉಪಸ್ಥಿತರಿದ್ದರು.

ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಲರಾದ ಡಾ. ಪ್ರಮೋದ್ ಕುಮಾರ್ ಸ್ವಾಗತಿಸಿ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ವಂದಿಸಿ, ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸೀಮಾ ನಿರೂಪಿಸಿದರು.

Exit mobile version