Site icon Suddi Belthangady

ಲಾಯಿಲ: ಕರ್ನೋಡಿ ಸ.ಉ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಲಾಯಿಲ: ಕರ್ನೋಡಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳು ಶಿಕ್ಷಕರ ಬಗ್ಗೆ ತಮ್ಮ ಅನಿಸಿಕೆಗಳನ್ನು ಭಾಷಣ, ಹಾಡು ಹಾಗೂ ಸ್ವ ರಚಿತ ಕವನಗಳನ್ನು ವಾಚಿಸುವುದರ ಮೂಲಕ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಪ್ರಾರ್ಥಿಸಿ, ಹೇಮಲತಾ ಸ್ವಾಗತಿಸಿ, ಆಯಿಷತ್ ರಿಫಾ ಧನ್ಯವಾದಗೈದರು.

Exit mobile version