ಬೆಳ್ತಂಗಡಿ: ಶಿಕ್ಷಕರ ದಿನಾಚರಣೆಯ ಸಮಿತಿ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ದ.ಕ.ಜಿ.ಪ.ಉಪಕಾರ್ಯದರ್ಶಿ ಆಡಳಿತಾಧಿಕಾರಿ ಪಿ. ಜ್ಞಾನೇಶ್ ಎಂ.ಪಿ. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರು ವೆಂಕಟೇಶ್ ತುಳುಪುಳೆ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ತಚ್ಚಮೆ, ತಾಲೂಕು ಮಟ್ಟದ ಶಿಕ್ಷಕರ ಸಂಘದ ಅಧ್ಯಕ್ಷರುಗಳು, ವಿವಿಧ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಅಧ್ಯಕ್ಷರು ಶಿಕ್ಷಕರ ದಿನಾಚರಣೆ ಸಮಿತಿ ಭವಾನಿ ಶಂಕರ್ ಸ್ವಾಗತಿಸಿದರು. ಕಾರ್ಯದರ್ಶಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಪ್ರಸ್ತಾಪಿಸಿದರು.ಬಿ ಆರ್ ಸಿ ಮೋಹನ್ ಕುಮಾರ್, ಜಿ ಎಸ್ ಪಿ ನಡದ ಪುಷ್ಪ ಸಂದೇಶ ವಾಚಿಸಿದರು.
ಈ ಸಂದರ್ಭದಲ್ಲಿ 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಾದ ರಾಧಾಕೃಷ್ಣ ಟಿ., ಅಮಿತಾನಂದ ಹೆಗ್ಡೆ, ದ. ಕ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಮಕೃಷ್ಣ ಭಟ್ ಚೊಕ್ಕಾಡಿ, ಪ್ರಶಾಂತ್ ಬಂದಾರು, ಕಲ್ಲೇಶಪ್ಪ ಇವರನ್ನು ಹಾಗೂ ಈ ವರ್ಷ ನಿವೃತ್ತರಾದ 23 ಶಿಕ್ಷಕರನ್ನು ಸನ್ಮಾನ ಮಾಡಲಾಯಿತು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪರವಾಗಿ ಅಧ್ಯಕ್ಷ ಸುರೇಶ್ ಎಂ. ಶಾಸಕರಿಗೆ ಬೇಡಿಕೆ ಬಗ್ಗೆ ನೀಡಿದ ಮನವಿ ವಾಚಿಸಿದರು