Site icon Suddi Belthangady

ಸೆ.6: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಉಚಿತ ವೈದ್ಯಕೀಯ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವಿ.ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಎಲ್ಲಾ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಉಚಿತ ವೈದ್ಯಕೀಯ ಶಿಬಿರ ಸೆ.6 ಶುಕ್ರವಾರ ಬೆಳಿಗ್ಗೆ 9.30ರಿಂದ ಸಂಜೆ 5ರ ತನಕ ನಡೆಯಲಿದೆ.

ಶಿಬಿರದಲ್ಲಿ ವೈದ್ಯರ ಸಮಾಲೋಚನೆ, ಇ.ಸಿ.ಜಿ ಪರೀಕ್ಷೆ, ರಕ್ತದೊತ್ತಡ ಮತ್ತು ಶುಗರ್(ಜಿ.ಆರ್.ಬಿ.ಎಸ್) ಪರೀಕ್ಷೆ ಉಚಿತವಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version