ಬೆಳ್ತಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆಯ ನೇತ್ರತ್ವದಲ್ಲಿ ಬಿಲ್ಲವ ಮಹಿಳಾ ವೇದಿಕೆಯ ಸಹಕಾರದೊಂದಿಗೆ ಯುವ ಸ್ಪೂರ್ತಿ-2024 ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಸಂಘದ ಮಾಜಿ ಅಧ್ಯಕ್ಷ ನೋಟರಿ ವಕಿಲ ಭಗೀರಥ ಜಿ. ಮಾತನಾಡುತ್ತಾ ಸಮಾಜದಲ್ಲಿ ಸಂಕಷ್ಟದಲ್ಲಿರುವ ಕುಟುಂಬಸ್ಥರ ಮಕ್ಕಳಿಗೆ ಪ್ರತಿ ವರ್ಷವೂ ವಿದ್ಯಾರ್ಜನೆಗಾಗಿ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಮಾತ್ರವಲ್ಲದೆ ಹಲವಾರು ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ ಅವರ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ವೆಚ್ಚವನ್ನು ಭರಿಸುತ್ತಾ ಬಂದಿರುತ್ತದೆ.ಈ ಸೇವೆ ಮುಂದೆಯೂ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.
ವ್ಯಕ್ತಿತ್ವ ವಿಕಸನ ತರಬೇತಿದಾರರಾಗಿ ಆಗಮಿಸಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ ಕೊಶಮಟ್ಟಂ ಫೈನಾನ್ಸ್ ಝೋನಲ್ ಹೆಡ್ ಶಾಜಿ ಕೆ ಕುರಿಯನ್ ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸಂಸ್ಕಾರಯುತವಾಗಿ ಬದುಕುವುದನ್ನು ಕಲಿತುಕೊಳ್ಳಬೇಕು. ಯಶಸ್ಸಿಗೆ ಕೇವಲ ಅಂಕವೊಂದೇ ಮಾನದಂಡವಲ್ಲದೆ ತ್ಯಾಗ ಪರಿಶ್ರಮ ಶ್ರದ್ದೆ ಕೂಡ ಪರಿಣಾಮಕಾರಿಯಾಗಿದ್ದು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶಯದಂತೆ ವಿದ್ಯೆಯಿಂದ ಸ್ವತಂತ್ರರಾಗಿ ಬದುಕುಕಟ್ಟಿಕೊಳ್ಳುವತ್ತ ನಿಮ್ಮ ಪ್ರಯತ್ನ ಸಾಗಲಿ ಎಂದರು.
ಗುರುದೇವ ಪದವಿ ಪೂರ್ವ ಕಾಲೇಜು ಉಪನ್ಯಾಸಕ ರಾಕೇಶ್ ಕುಮಾರ್ ನಾರಾಯಣ ಗುರುಗಳ ಬಗ್ಗೆ ಉಪನ್ಯಾಸ ನೀಡಿದರು. ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್.ಕೋಟ್ಯಾನ್, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ನಿರ್ದೇಶಕರಾದ ಹರಿದಾಸ್ ಕೇದೆ, ಕಮಲಾಕ್ಷ ಬೆಳ್ತಂಗಡಿ, ಗುರುರಾಜ್ ಗುರಿಪಳ್ಳ, ಸಂತೋಷ್ ಕೆ.ಸಿ., ರೂಪೇಶ್ ಧರ್ಮಸ್ಥಳ, ಪ್ರಮೋದ್ ಮಚ್ಚಿನ, ಅನೂಪ್ ಬಂಗೇರ, ಚಂದ್ರಶೇಖರ್, ಸಂಜೀವ ಪೂಜಾರಿ ಕೊಡಂಗೆ, ನಾರಾಯಣ ಉಚ್ಚೂರು, ರಾಜಶ್ರೀ ರಮಣ್, ಗುಣಕರ ಅಘ್ನಾಡಿ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ, ಯುವಬಿಲ್ಲವ ವೇದಿಕೆ ಕಾರ್ಯದರ್ಶಿ ಸಂತೋಷ್ ಅರಳಿ ಉಪಸ್ಥಿತರಿದ್ದರು.
ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಮ್.ಕೆ.ಪ್ರಸಾದ್ ಸ್ವಾಗತಿಸಿ, ಪ್ರಚಾರ ಕಾರ್ಯದರ್ಶಿ ಆಕಾಶ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.