ಬೆಳ್ತಂಗಡಿ: ಬೆಳ್ತಂಗಡಿ 14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವದ ಉದ್ಘಾಟನೆಯ ಕಾರ್ಯಕ್ರಮ ಸೆ.5ರಂದು ಶ್ರೀ ಗುರು ನಾರಾಯಣ ಸ್ವಾಮಿ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಸಭಾಭವನದಲ್ಲಿ ನಡೆಯಿತು.
ಬೆಳ್ಳಿಗೆ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಪ್ರತಿಷ್ಠಾ ಹೋಮ, ಪ್ರತಿಷ್ಠಾ ಕಲಶ ಪೂಜೆ, ಗಣಹೋಮ, ಅಪ್ಪದ ಪೂಜೆ, ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಗೌರಿ ಗಣೇಶ ಉದ್ಘಾಟನೆಯನ್ನು ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ ಮೇಜರ್ ಜನರಲ್ ಎಂ.ವಿ.ಭಟ್ ಉದ್ಘಾಟನೆಯನ್ನು ಮಾಡಿದರು.ಅಧ್ಯಕ್ಷತೆಯನ್ನು ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಚಂದ್ರಾವತಿ, ಬೆಳ್ತಂಗಡಿ ತಾಲೂಕು ಗಣೇಶೋತ್ಸವದ ಪ್ರಧಾನ ಕಾರ್ಯದರ್ಶಿ ಕೇಶವ ಗೌಡ ಬೆಳಾಲು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ತಾಲೂಕು 28 ನಿವೃತ್ತ ಸೈನಿಕರಿಗೆ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಅತೀ ಹೇಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಗಣೇಶೋತ್ಸವದ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.