ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸೆ.6ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯ ಕೆ.ಸುರೇಶ್ ಮಾತನಾಡಿ ಡಾ.ಸರ್ವೆಪಲ್ಲಿ ರಾಧಾಕೃಷ್ಣರವರ ಬಗ್ಗೆ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.ಶಿಕ್ಷಕಿ ತ್ರಿವೇಣಿ ಡಾ.ಸರ್ವೆಪಲ್ಲಿ ರಾಧಾಕೃಷ್ಣರವರ ಬಾಲ್ಯ ಅವರ ಜೀವನ ಶೈಲಿ ಉಡುಗೆ ತೊಡುಗೆ ಬಗ್ಗೆ ಆದ್ಯಾತ್ಮದ ಬಗ್ಗೆ ಅವರ ಅರಿವು ಇವಗಳ ಬಗ್ಗೆ ತಿಳಿಸಿದರು.
8ನೇ ತರಗತಿಯ ವಿದ್ಯಾರ್ಥಿನಿಯರು ಪ್ರಾರ್ಥನೆ ಮಾಡಿದರು ಹತ್ತನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಶಿಕ್ಷಕರ ದಿನಾಚರಣೆಯ ವಿಶೇಷತೆಯ ಬಗ್ಗೆ ತಿಳಿಸಿದರು.
ವಿದ್ಯಾರ್ಥಿ ನಿಶಿತ್ ಶಿಕ್ಷಕರಿಗೆ ಸ್ಮರಣಿಕೆ ಪಟ್ಟಿಯನ್ನು ವಾಚಿಸಿದರು. ಯಶವಂತ್ ಸ್ವಾಗತಿಸಿ ಜೀವಿತ್ ವಂದಿಸಿದರು. ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.