ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಮರ್ಪಣೆ ಮಾಡಲಾಯಿತು.
ವಿಯೋನ ಡಿ’ಸೋಜ ಶಿಕ್ಷಕರ ದಿನಾಚರಣೆ ಮಹತ್ವವನ್ನು ತಿಳಿಸಿದರು. ಶಾಲಾ ಸಂಚಾಲಕ ಅತೀ ವಂ.ಫಾ.ವಾಲ್ಟರ್ ಡಿಮೆಲ್ಲೋ ರವರು ಶಿಕ್ಷಕ ವೃಂದದವರಿಗೆ ಉಡುಗೊರೆಯನ್ನು ನೀಡಿ ಶುಭವನ್ನು ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯ ವಂ.ಫಾ.ಕ್ಲಿಫರ್ಡ್ ಪಿಂಟೋರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿ ಶುಭಾಶಯವನ್ನು ಕೋರಿದರು.
ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರಮೇಶ್ ಉಪಸ್ಥಿತರಿದ್ದರು. ಶಿಕ್ಷಕರಿಗೆ ಹಲವು ಅದೃಷ್ಟ ಆಟಗಳನ್ನು ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹತ್ತನೇ ತರಗತಿಯ ವಿದ್ಯಾರ್ಥಿಗಳು ನಟನೆ, ನೃತ್ಯಗಳ ಮೂಲಕ ಎಲ್ಲರ ಮನ ರಂಜಿಸಿದರು. ಶುಭಾಶಯ ಗೀತೆಯನ್ನು ಹಾಡಿದರು.
ವಿದ್ಯಾರ್ಥಿಗಳಾದ ಮನ್ವಿತ ಸ್ವಾಗತಿಸಿ, ಆದಿತ್ಯ ವಂದಿಸಿದರು.ಜಾನಿಸ್ ಬೆನ್ನಿಸ್ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಬ್ಲೆಂಡಿನ್ ರೊಡ್ರಿಗಸ್ ಸಹಕರಿಸಿದರು.