ಬೆಳ್ತಂಗಡಿ: ಲಯನ್ಸ್ ಕ್ಲಬ್ ಇದರ ಸ್ಥಾಪಕ ಸದಸ್ಯರಲ್ಲಿ ಓರ್ವರಾದ ಎಂ.ಜಿ.ಶೆಟ್ಟಿಯವರಿಗೆ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯಿಂದ ಎಂ.ಜೆ.ಎಫ್ (Melvin Jones Fellow) ಗೌರವ ಲಭಿಸಿದೆ.
ಕಳೆದ 51 ವರ್ಷಗಳಿಂದ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಕ್ರಿಯ ಸದಸ್ಯರಾಗಿ, ಮಾರ್ಗದರ್ಶಕರಾಗಿ ಒಳ್ಳೆಯ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಾ ಬಂದಿರುವ ಎಂ.ಜಿ.ಶೆಟ್ಟಿಯವರು ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ.
ಇವರು ಬೆಳ್ತಂಗಡಿ ಲಯನ್ಸ್ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.