ಬೆಳ್ತಂಗಡಿ: ಸೈಂಟ್ ಮೇರಿಸ್ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

0

ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಯೋಗದಲ್ಲಿ ವಲಯ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟವು ಸೆ.6ರಂದು ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ವಿವಿಧ ಶಾಲೆಯ 16 ತಂಡಗಳು ಭಾಗವಹಿಸಿದ್ದು, ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಜೂನಿಯರ್ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಹಾಗೂ ದ್ವಿತೀಯ ಸ್ಥಾನವನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇಲ್ಲಿಯ ವಿದ್ಯಾರ್ಥಿಗಳು ಮುಡಿಗೇರಿಸಿಕೊಂಡರು.ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಹಾಗೂ ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಕೊಯ್ಯುರು ಇಲ್ಲಿಯ ವಿದ್ಯಾರ್ಥಿನಿಯರು ಮುಡಿಗೇರಿಸಿಕೊಂಡರು.

ಸ್ಪರ್ದಾಳುಗಳಿಗೆ ವೈಯಕ್ತಿಕವಾಗಿ ಉತ್ತಮ ಹಿಡಿತಗಾರ, ಉತ್ತಮ ದಾಳಿಗಾರ ಹಾಗೂ ಸವ್ಯಸಾಚಿ ಆಟಗಾರ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಮುಖ್ಯ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪೂರ್ಣ ಸಹಕಾರವನ್ನಿತ್ತರು.ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕ-ರಕ್ಷಕ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here