Site icon Suddi Belthangady

ಬದನಾಜೆ: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಶಾಲೆಯ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ: ಅಣಿಯೂರು, ಮುಂಡಾಜೆ ವಲಯ ಮಟ್ಟದ ಪ್ರಾಥಮಿಕ ಶಾಲಾ ತ್ರೋಬಾಲ್ ಪಂದ್ಯಾಟವು ಬದನಾಜೆ ಹಿ.ಪ್ರಾ.ಶಾಲೆಯಲ್ಲಿ ಸೆ.6ರಂದು ನಡೆಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಉದ್ಘಾಟಿಸಿದರು.ಪಂಚಾಯತ್ ಸದಸ್ಯರುಗಳಾದ ನಾಗವೇಣಿ, ಸವಿತಾ, ಉದ್ಯಮಿ ರಾಮಯ್ಯ ಗೌಡ ಮಾಚಾರು, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಮುನಾ, ನಿವೃತ್ತ ಮುಖ್ಯ ಶಿಕ್ಷಕಿ ಶಾರದಾ, ಪ್ರತಿಮಾ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ, ಪ್ರಶಾಂತ್ ಸಮೂಹ ಸಂಪನ್ಮೂಲ ಅಧಿಕಾರಿ ಪ್ರಶಾಂತ್,ಯುವತಿ ಮಂಡಲದ ಅಧ್ಯಕ್ಷೆ ನವೀನ, ವಲಯ ದೈಹಿಕ ಶಿಕ್ಷಣ ಸಂಯೋಜಕ ರವಿ, ಶಿಕ್ಷಕರ ಸಂಘದ ಕಾರ್ಯದರ್ಶಿ ಸುರೇಶ್ ಮಾಚಾರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅನಿಲ್ ಡಿಸೋಜ ಉಪಸ್ಥಿತರಿದ್ದರು.

ಸಮೂಹ ಸಂಪನ್ಮೂಲ ಅಧಿಕಾರಿ ಪ್ರತಿಮಾ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಶಿಕ್ಷಕಿ ಲಲಿತ ಕುಮಾರಿ ಸ್ವಾಗತಿಸಿದರು. ಶಿಕ್ಷಕಿ ಜಯಂತಿ ಕುಮಾರಿ ಶ ವಂದಿಸಿ ಶಿಕ್ಷಕಿ ಜಯಲಕ್ಷ್ಮಿ ನಿರೂಪಿಸಿದರು. ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ನಿರಂಜನ್ ದೈಹಿಕ ಶಿಕ್ಷಕರು ತರಬೇತಿ ನೀಡಿದರು.

Exit mobile version