Site icon Suddi Belthangady

ಸೇವಾಭಾರತಿಯಿಂದ “ಸೇವಾ ಶ್ರೇಷ್ಠ -2024” ಪುರಸ್ಕಾರ

ಬೆಳ್ತಂಗಡಿ: ಸೇವಾಭಾರತಿ ಕನ್ಯಾಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ 3 ದಿನಗಳ ಉಡುಪಿ ಜಿಲ್ಲಾ ಸಮಾವೇಶ – 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರದ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 4 ರಂದು ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಡಾ.ಉದಯಶಂಕರ ಎಚ್. ಜಿ ಆರ್ಥೋಪೆಡಿಕ್ ಸರ್ಜನ್, ಪ್ರಶಮನೀ ಆಸ್ಪತ್ರೆ, ಕೊಪ್ಪ ಇವರು ಮಾಡಿದಂತಹ ಸೇವಾ ಕಾರ್ಯಗಳನ್ನು ಗುರುತಿಸಿ, ಸೇವಾಭಾರತಿ ಸಂಸ್ಥೆಯ ವತಿಯಿಂದ “ಸೇವಾ ಶ್ರೇಷ್ಠ -2024” ಗೌರವವನ್ನು ನೀಡಿ ಸನ್ಮಾನಿಸಲಾಯಿತು.

ವೈದ್ಯಕೀಯ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು “ಸರ್ವ ರೋಗ ಪ್ರಶಮನೀ” ಆಸ್ಪತ್ರೆಯನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಆಶಾಕಿರಣವಾಗಿದ್ದಾರೆ. ಸೇವಾಭಾರತಿ ಸಂಸ್ಥೆಯ ಹಲವಾರು ಕಾರ್ಯಚಟುವಟಿಕೆಯಲ್ಲಿ ಕೈಜೋಡಿಸಿದ್ದು ಸಾಮಾಜಿಕ ಸೇವೆ, ಆರೋಗ್ಯ ಸೇವೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಮಾಡಿದ ಅನುಪಮ ಸಾಧನೆಯನ್ನು ಪರಿಗಣಿಸಿ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೌತಡ್ಕದ ವತಿಯಿಂದ ಮನಪೂರ್ವಕವಾಗಿ ಅಭಿನಂದಿಸಿ “ಸೇವಾಶ್ರೇಷ್ಠ 2024” ಗೌರವಕ್ಕೆ ಭಾಜನರಾಗಿದ್ದಾರೆ.

Exit mobile version