Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಮತ್ತಿಲ ಎಂಬಲ್ಲಿ ವಾಸಿಸುತ್ತಿರುವ ಬೇಬಿರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ದುರ್ಗಾ ಸಂಘದ ಸದಸ್ಯರಾಗಿರುತ್ತಾರೆ. ಅವರ ಮನೆಯ ಹಿಂಭಾಗದ ಗೋಡೆಯು ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಮಾಡಿರುವ ರೂ.10,000 ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಸುಂದರ ಗೌಡ ಬಜಿಲರವರು ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ನೂತನ ಅಧ್ಯಕ್ಷ ರಾಧೇಶ್ ಗೌಡ ಬಜಿಲ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಸದಸ್ಯೆ ಭಾರತಿ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಸೇವಾ ಪ್ರತಿನಿಧಿ ವೀಣಾರವರು ಉಪಸ್ಥಿತರಿದ್ದರು.

Exit mobile version