Site icon Suddi Belthangady

ಮಿತ್ತಬಾಗಿಲು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಗಣೇಶೋತ್ಸವ

ಬೆಳ್ತಂಗಡಿ: ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ.7ರಂದು 40ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕೊಲ್ಲಿ ಶ್ರೀ ದುರ್ಗಾದೇವಿ ಕಲಾಮಂದಿರದಲ್ಲಿ ನಡೆಯಿತು.

ಬೆಳಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ ಮೂರ್ತಿಯ ಪ್ರತಿಷ್ಠೆ, 10ಕ್ಕೆ ಗಣಹೋಮ ಆರಂಭ, 11ಕ್ಕೆ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾದೇವಿ ಮಕ್ಕಳ ಕುಣಿತ ಭಜನಾ ಮಂಡಳಿಯಿಂದ ಭಜನೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2ರಿಂದ ಸಾರ್ವಜನಿಕರಿಗೆ, ಮಕ್ಕಳಿಗೆ ಆಟೋಟ ಸ್ಪರ್ಧೆ. 3ಕ್ಕೆ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಭಜನೆ, 5ಕ್ಕೆ ಮಿತ್ತಬಾಗಿಲು ಓಂಕಾರ ಭಜನಾ ಮಂಡಳಿಯಿಂದ ಭಜನೆ. 6ಕ್ಕೆ ಮಹಿಳೆಯರಿಂದ ಲಲಿತಾಸಹಸ್ರನಾಮ ವಾಚನ, ರಾತ್ರಿ 7ಕ್ಕೆ ಮಿತ್ತಬಾಗಿಲು ಗಣೇಶನಗರದ ಪಂಚಶ್ರೀ ಭಜನಾ ಮಂಡಳಿಯಿಂದ ಭಜನೆ, ರಾತ್ರಿ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಂತರ ನೇತ್ರಾವತಿ ನದಿಯಲ್ಲಿ ದೇವರ ಮೂರ್ತಿ ವಿಸರ್ಜನೆ ನೆರವೇರಲಿದೆ.

Exit mobile version