Site icon Suddi Belthangady

ಬಳಂಜ: 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ಅನ್ನಸಂತರ್ಪಣೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಬಳಂಜ ಶ್ರೀ ಶಾರದಾ ಕಲಾ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ಗಣಪತಿ ಪ್ರತಿಷ್ಠೆ, 24 ತೆಂಗಿನ ಕಾಯಿ ಗಣಪತಿ ಹೋಮ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ವಿವಿಧ ಕ್ರೀಡಾಕೂಟ, ಧಾರ್ಮಿಕ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಗುರುಪ್ರಸಾದ್ ಹೆಗ್ಡೆ ವಹಿಸಿದ್ದರು. ಸಂತೋಷ್ ಕುಮಾರ್ ಕಾಪಿನಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭವನ್ನು ಹಾರೈಸಿದರು.

ಎಚ್.ದರ್ಣಪ್ಪ ಪೂಜಾರಿ, ಬಳಂಜ ಬಿಲ್ಲವ ಸಂಘದ ಅಧ್ಯಕ್ಷರಾದ ಸಂತೋಷ್ ಕೋಟ್ಯಾನ್, ಸತೀಶ್ ರೈ ಬಾರ್ಧಡ್ಕ, ಕಾರ್ಯದರ್ಶಿ ಯಶೋಧರ್ ಶೆಟ್ಟಿ, ಪತ್ರಕರ್ತರಾದ ಮನೋಹರ್ ಬಳಂಜ, ಎಚ್.ದೇಜಪ್ಪ ಪೂಜಾರಿ, ತಿಮ್ಮಪ್ಪ ಪೂಜಾರಿ ನಿಟ್ಟಡ್ಕ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.ಸಂಜೆ ವಿವಿಧ ಕುಣಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಹಾಗೂ ವಿವಿಧ ವೇಷಭೂಷಣಗಳೊಂದಿಗೆ ಗಣಪತಿ ದೇವರ ಶೋಭಯಾತ್ರೆ ನಡೆಯಲಿದ್ದು ಕಾಪಿನಡ್ಕ ಫಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.

Exit mobile version