Site icon Suddi Belthangady

ಬೆದ್ರಬೆಟ್ಟು: ಮಾರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆದ್ರಬೆಟ್ಟು: ಮಾರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಸಂಭ್ರಮದಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದ ವೇದಿಕೆಯಲ್ಲಿ ಶಾಲಾ ಸಂಚಾಲಕ ವಂದನೀಯ ಫಾದರ್ ಸೆಬಾಸ್ಟಿಯನ್, ಶಾಲಾ ಮುಖ್ಯ ಶಿಕ್ಷಕಿ ವಂದನೀಯ ಸಿಸ್ಟರ್ ಶೆರಿನ್, ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಉಪಸ್ಥಿತರಿದ್ದ ಎಲ್ಲಾ ಶಿಕ್ಷಕರಿಗೆ ವಿದ್ಯಾರ್ಥಿಗಳು ಹೂವನ್ನು ನೀಡಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಸಭಾ ಕಾರ್ಯಕ್ರಮ ಮತ್ತು ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಿ ಕೊಟ್ಟರು. ಶಾಲಾ ವಿದ್ಯಾರ್ಥಿಗಳು ಶಿಕ್ಷಕರಿಗೆಲ್ಲರಿಗೂ ಪ್ರೀತಿಯ ಉಡುಗೊರೆಯನ್ನು ನೀಡಿ ಶಿಕ್ಷಕರ ದಿನಾಚರಣೆಯ ಶುಭಾಶಯವನ್ನು ಕೋರಿದರು. ಶಿಕ್ಷಕರಿಗಾಗಿ ಅನೇಕ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಶಿಕ್ಷಕರಿಗೆ ಬಹುಮಾನವನ್ನು ನೀಡಿ ವಿದ್ಯಾರ್ಥಿಗಳು ಅಭಿನಂದಿಸಿದರು. ಶಾಲಾ ಸಂಚಾಲಕರು ಶಾಲಾ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು.

ಕಾರ್ಯಕ್ರಮ ನಿರೂಪಣೆಯನ್ನು ಫಾತಿಮತ್ ಶಾಜ್ಮ 9ನೇ ತರಗತಿ, ಬಂದವರೆಲ್ಲರನ್ನು ಯಶಸ್ 10ನೇ ತರಗತಿ ಸ್ವಾಗತಿಸಿ, ಮೊಹಮ್ಮದ್ ಬಿಲಾಲ್ ಇವರು ವಂದಿಸಿದರು.

Exit mobile version