Site icon Suddi Belthangady

ಬೆಳಾಲು: 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬೆಳಾಲು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳಾಲು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳಾಲು ಸಹಕಾರದೊಂದಿಗೆ ಬೆಳಾಲಿನ ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ಆಶ್ರಯದಲ್ಲಿ 43 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳಾಲು ಶ್ರೀ ಧ.ಮ. ಪ್ರೌಢಶಾಲೆಯಲ್ಲಿ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೆ.7ರಂದು ದುರ್ಗಾಪ್ರಸಾದ್ ಕೆರ್ಮುಣ್ಣಾಯರ ಪೌರೋತ್ಯದಲ್ಲಿ ಜರಗಿತು.

ಬೆಳಿಗ್ಗೆ ನಂದಾದೀಪ ಬೆಳಗಿಸಿ ಶ್ರೀ ಮಹಾ ಗಣಪತಿ ದೇವರ ಪ್ರತಿಷ್ಠೆಯ ಬಳಿಕ ಅನಂತೋಡಿ ಅನಂತ ಪದ್ಮನಾಭ ಮಹಿಳಾ ಕುಣಿತ ಭಜನಾ ತಂಡ, ಶ್ರೀ ಮಾಯ ಮಹೇಶ್ವರ ಮಹಿಳಾ ಭಜನಾ ತಂಡ, ಹಿಂದೂ ಜಾಗರಣ ವೇದಿಕೆ ಶ್ರೀ ರಾಮ ಶಾಖೆಯ ಸದಸ್ಯರಿಂದ, ಕೊಲ್ಪಾಡಿ ಶ್ರೀ ಸುಬ್ರಹ್ಮಣ್ಯ ಶ್ವರ ಭಜನಾ ಮಂಡಳಿ, ಅನಂತೋಡಿ ಶ್ರೀ ಅನಂತೇಶ್ವರ ಭಜನಾ ಮಂಡಳಿ, ಸರಸ್ವತಿ ಭಜನಾ ತಂಡ, ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿ, ಶ್ರೀ ಕಾಳಿಕಾಂಬ ಭಜನಾ ಮಂಡಳಿಭಜನಾ ಕಾರ್ಯಕ್ರಮ, ಮದ್ಯಾಹ್ನ ಮಹಾ ಪೂಜೆ, ಅನ್ನ ಸಂತರ್ಪಣೆ ನಡೆಯಿತು. ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಶಾಲಾ ನೂತನ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಇವರಿಗೆ ವಿದ್ಯಾ ಸರಸ್ವತಿ, ಮತ್ತು ಸಮಿತಿಯ ಗೌರವಾಧ್ಯಕ್ಷ ಶಿವಕುಮಾರ್ ಬಾರಿತ್ತಾಯ ಪಾರಳ ಇವರಿಗೆ ಯುವ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಗಣೇಶೋತ್ಸವ ಪ್ರಯುಕ್ತ ಏರ್ಪಡಿಸಲಾಗಿದ್ದ ವಿವಿಧ ಆಟೋಟ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ರಾಮಚಂದ್ರ ಗೌಡ, ಕೋಶಾಧಿಕಾರಿ ದಿವಾಕರ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯೋಜನೆಯ ಮೇಲ್ವಿಚಾರಕಿ ಸಮಿತಿಯ ಸಂಚಾಲಕಿ ವನಿತಾ ವನಿತಾ ಸ್ವಾಗತಿಸಿ, ಸೇವಾ ಪ್ರತಿನಿಧಿ ಪ್ರಮೀಳಾ ವಂದಿಸಿದರು.

ಉಪನ್ಯಾಸಕ ಬೆಳಿಯಪ್ಪ ಗೌಡ ನಿರೂಪಿಸಿದರು.ಒಕ್ಕೂಟದ ಅಧ್ಯಕ್ಷರುಗಳಾದ ಗಂಗಾಧರ ಸಾಲಿಯಾನ್, ರತ್ನಾಕರ ಆಚಾರ್ಯ, ನೀಲಾವತಿ, ಸೇವಾ ಪ್ರತಿನಿಧಿಗಳಾದ ತಾರನಾಥ ಗೌಡ, ಪ್ರಭಾವತಿ, ನಿಕಟ ಪೂರ್ವ ಕಾರ್ಯದರ್ಶಿ ಹರೀಶ್ ಆಚಾರ್ಯ, ಸಮಿತಿ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಊರವರು ಸಹಕರಿಸಿದರು.

ಬಳಿಕ ಮಾಯ ಮಹೇಶ್ವರ ಭಜನಾ ಮಂಡಳಿ ಮಾಯ, ಕೊಲ್ಪಾಡಿ ಸುಬ್ರಹ್ಮಣ್ಯಶ್ವರ ಭಜನಾ ಮಂಡಳಿ, ಮಲೆಬೆಟ್ಟು ಶ್ರೀ ಮಹಾ ಗಣಪತಿ ಭಜನಾ ಮಂಡಳಿ, ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿ ಕುಣಿತ ತಂಡಗಳಿಂದ ಕುಣಿತ ಭಜನೆಯೊಂದಿಗೆ ವೈಭವದ ಶೋಭಾಯಾತ್ರೆಯ ಮೂಲಕ ಮಾಯ ಎಂಜಿರಿಗೆಯಲ್ಲಿ ಮೂರ್ತಿಯ ವಿಸರ್ಜನೆ ನಡೆಯಿತು.

Exit mobile version