Site icon Suddi Belthangady

ನಿಡ್ಲೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ- ನೂತನ ಕಟ್ಟಡ ಉದ್ಘಾಟನೆ

ನಿಡ್ಲೆ: ನಿಡ್ಲೆ-ಕಳೆಂಜ ಗ್ರಾಮಗಳ ವ್ಯಾಪ್ತಿ ಹೊಂದಿರುವ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಯಶಸ್ವಿಯಾಗಿ ಶತ ಸಂವತ್ಸರ ಪೂರೈಸಿರುವ ಸವಿನೆನಪಿಗಾಗಿ ಶತಮಾನೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.8ರಂದು ಸಂಘದ ಕೇಂದ್ರ ಕಚೇರಿ ವಠಾರದಲ್ಲಿ ನಡೆಯಿತು.

ಸಂಘದ ನೂತನ ಕಚೇರಿ ಮತ್ತು ಗೋದಾಮು ಕಟ್ಟಡವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಸಂಘದ ಭದ್ರತಾ ಕೊಠಡಿಯನ್ನು ಶಾಸಕ ಹರೀಶ್ ಪೂಂಜ, ಕ್ಯಾಂಪ್ಕೊ ಖರೀದಿ ಕೇಂದ್ರವನ್ನು ಕ್ಯಾಂಪ್ಕೊ ಉಪಾಧ್ಯಕ್ಷ ಶಂಕರ ನಾರಾಯಣ ಭಟ್ ಉದ್ಘಾಟನೆ ಮಾಡಿದರು.

ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ. ಅಧ್ಯಕ್ಷತೆಯಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಪದ್ಮನಾಭ ಅರ್ಕಜೆ, ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ., ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ ಪ್ರತಿಮಾ ಸಂಘದ ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳು ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಪದ್ಮನಾಭ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ತಿಕ್ ತಾಮನ್ ಕರ್ ಪ್ರಾರ್ಥಿಸಿ, ವಿಷ್ಣು ಮರಾಟೆ ಸ್ವಾಗತಿಸಿ, ಪ್ರಾಸ್ಥವಿಕವಾಗಿ ಮಾತನಾಡಿದರು.ಗಂಗಾಧರ್ ಭಂಡಾರಿ ಕಾರ್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು.

Exit mobile version