


ಬಂದಾರು: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಯು ಸೆ.8ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮೆನೇಜರ್ ಬಾಲಕೃಷ್ಣ ಪೂಜಾರಿ ಬಜೆ, ದೇವಸ್ಥಾನದ ಮಾಜಿ ಅಧ್ಯಕ್ಷ ಹೊನ್ನಪ್ಪ ಗೌಡ ಸೋಣಕುಮೇರು, ಆಡಳಿತ ಮೊಕ್ತೇಸರ ಕುಕ್ಕಪ್ಪ ಗೌಡ ಕೋಡಿಮಜಲು, ಅರ್ಚಕ ಅನಂತರಾಮ ಶಬರಾಯರು, ಪ್ರಮುಖರು, ಊರ ಹಿರಿಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.









