


ಅಳದಂಗಡಿ: ಇಲ್ಲಿಯ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸೆ.5ರಂದು ಆಚರಿಸಲಾಯಿತು.ಶಾಲಾ ಸಂಚಾಲಕ ವಂದನೀಯ ಧರ್ಮ ಗುರುಗಳಾದ ಎಲಿಯಸ್ ಡಿಸೋಜಾ ರವರು ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಿಕ್ಷಕರ ದಿನಾಚರಣೆ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.
ಶಾಲಾ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ನೀಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ನೋಬರ್ಟ್ ವಿನ್ಸೆಂಟ್ ಪೌಲ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ತುಂಬು ಉತ್ಸಾಹದಿಂದ ಪಾಲ್ಗೊಂಡಿದ್ದರು.