ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ವಸಂತಿ ಕುಲಮರ್ವ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ಕಲಾ ಮತ್ತು ವಾಣಿಜ್ಯ ವಿಭಾಗದ ಶಿಕ್ಷಕ ರಕ್ಷಕ ಸಂಘದ ಸಭೆಯಲ್ಲಿ ಮಾತನಾಡುತ್ತಾ, ಪಿಯುಸಿ ಹಂತದಲ್ಲಿರುವ ಮಕ್ಕಳನ್ನು ಹೆತ್ತವರು ಸ್ನೇಹಿತರಂತೆ ಕಾಣುತ್ತಾ ಅವರಿಗೆ ಭರವಸೆಯನ್ನು ತುಂಬುತ್ತಾ ಓದಿನ ಕಡೆ ಗಮನಹರಿಸುವಂತೆ ಪ್ರೋತ್ಸಾಹಿಸಬೇಕು. ತಪ್ಪುಗಳನ್ನು ಎಸೆದಾಗ ಸಾವಧಾನದಿಂದ ಬುದ್ಧಿ ಹೇಳಿ ತಿದ್ದಿಕೊಳ್ಳಲು ಅವಕಾಶ ನೀಡಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು.
p>