Site icon Suddi Belthangady

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

ಬೆಳಾಲು: ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಸೆ.6ರಂದು ಜರಗಿತು.

ತ್ರೋಬಾಲ್ ಪಂದ್ಯಾಟವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ಇವರು ಉಪಸ್ಥಿತರಿದ್ದರು.

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಪಡೆದುಕೊಂಡಿತು.ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಸರ್ಕಾರಿ ಪ್ರೌಢಶಾಲೆ ಕಾಯರ್ತ್ತಡ್ಕ ದ್ವಿತೀಯ ಸ್ಥಾನ ಸರ್ಕಾರಿ ಪ್ರೌಢಶಾಲೆ ಬದನಾಜೆ ಪಡೆದುಕೊಂಡಿತು.

ಮುಖ್ಯೋಪಾಧ್ಯಾಯ ಜಯರಾಮ್ ಮಯ್ಯ ಸ್ವಾಗತಿಸಿ, ಶಿಕ್ಷಕಿ ಕೋಕಿಲ ವಂದಿಸಿದರು.ಶಿಕ್ಷಕ ಸುಮನ್ ಯು.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Exit mobile version