ಬೆಳ್ತಂಗಡಿ: ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ.ಶ್ರುತ ಕೀರ್ತಿರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಸಿಇಟಿ, ನೀಟ್ ನಂತಹ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕಾದರೆ ವಿದ್ಯಾರ್ಥಿ ಸ್ವ ಆಸಕ್ತಿಯಿಂದ ಇಷ್ಟಪಟ್ಟು ಅಧ್ಯಯನ ಮಾಡಬೇಕು. ಪರೀಕ್ಷೆಯ ಫಲಿತಾಂಶ ಬರುವವರೆಗೆ ತಾಳ್ಮೆಯಿಂದ ಕಾಯಬೇಕು.ಆತಂಕದಿಂದ ಆತುರದ ನಿರ್ಧಾರ ಕೈಗೊಂಡು ಅಧಿಕ ವೆಚ್ಚ ಮಾಡಿ ವಿವಿಧ ಕೋರ್ಸ್ಗಳನ್ನು ಮಾಡುವ ಯೋಚನೆಯಿಂದ ಹೊರಬರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕಿ ವಿನಯಾ ಬಿಡೆ ಕಾರ್ಯಕ್ರಮ ನಿರೂಪಿಸಿದರು.
p>