Site icon Suddi Belthangady

ಶಿಬಾಜೆ: 38ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

ಶಿಬಾಜೆ: ಸಾರ್ವಜನಿಕ ಗಣೇಶೋತ್ಸವ ಶಿಬಾಜೆ, ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಇದರ ಸಹಕಾರದೊಂದಿಗೆ 38 ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಸೆ‌.7ರಂದು ಶ್ರೀ ಕ್ಷೇತ್ರ ಮೊಂಟೆತ್ತಡ್ಡ ದುರ್ಗಾಪರಮೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಿತು.ಬೆಳ್ಳಿಗೆ ಗಣಹೋಮ,ಗಣಪತಿ ಪ್ರತಿಷ್ಠೆ ನಡೆಯಿತು.ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಇದರ ಸಭಾಧ್ಯಕ್ಷನ್ನು ಶಿಬಾಜೆ ಗಣೇಶೋತ್ಸವದ ಗೌರವಾಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕರಾದ ಕೆ.ಮೋಹನ್ ಕುಮಾರ್ ಧಾರ್ಮಿಕ ಉಪನ್ಯಾಸ ನೀಡಿದರು.ಮುಖ್ಯ ಅತಿಥಿಗಳಾಗಿ ಶಿಬಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾ ಪತ್ತಿಮಾರು, ಉಪಾಧ್ಯಕ್ಷ ದಿನಕರ ಕುರೂಪ್, ಬರ್ಗುಳ, ಎಸ್.ಕೆ.ಡಿ.ಆರ್.ಡಿ.ಪಿ ಅರಿಸಿನಮಕ್ಕಿ ವಲಯ ಮೇಲ್ವಿಚಾರಕಿ ಶಶಿಕಲಾ, ಶಿಬಾಜೆ ಗಣೇಶೋತ್ಸವದ ಅಧ್ಯಕ್ಷ ಸುಬ್ರಾಯ ಗೌಡ ಉಪಸ್ಥಿತರಿದ್ದರು.

ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ತದನಂತರ ಗಣೇಶ ವಿಗ್ರಹದ ಶೋಭಯಾತ್ರೆ ದೇವಿಗುಂಡಿ ಹೊಳೆ ವರೆಗೆ ನಡೆದು ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ಗಣಪತಿ ವಿಸರ್ಜನೆ ಮಾಡಲಾಯಿತು.

Exit mobile version