ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮಧ್ಯವರ್ಜನಾ ಶಿಬಿರ ನಡೆಸುವರೇ ಪೂರ್ವ ತಯಾರಿ ಸಭೆ ಸೆ.11ರಂದು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
748ನೇ ಶಿಬಿರದ ಅಧ್ಯಕ್ಷ ಎನ್.ಜತ್ತಣ್ಣ ಗೌಡ, ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಮಾಧವ ಗೌಡ, ಬೆಳಾಲು ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಎಳ್ಳುಗದ್ದೆ, ನಿವೃತ್ತ ಪ್ರಾದೇಶಿಕ ನಿರ್ದೇಶಕರು ಸೀತಾರಾಮ ಶೆಟ್ಟಿ ಕೆಂಬರ್ಜೆ, ಜನಜಾಗೃತಿಯ ವಲಯ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷೆ ಶಾರದ ರೈ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್, ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ತಿಮ್ಮಪ್ಪ ಗೌಡ ಬನಂದೂರು, ಡಿ. ಎ. ರೆಹಮಾನ್, ನವ ಜೀವನ ಸಮಿತಿಯ ಸದಸ್ಯರು ಒಕ್ಕೂಟದ ಪದಾಧಿಕಾರಿಗಳು ಊರಿನಗಣ್ಯರ ಸಮ್ಮುಖದಲ್ಲಿ ಮತ್ತು ಮಧ್ಯವರ್ಜನ ಶಿಬಿರದ ಪೂರ್ವ ತಯಾರಿ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಸಭೆಯನ್ನು ಪ್ರಾರಂಭಿಸಲಾಯಿತು.
ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆoಟ್ ಪಾಯಸ್ ಮಾತನಾಡಿ ಗಾಂಧೀಜಿಯವರ ಕನಸನ್ನು ನನಸು ಮಾಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕಾರ್ಯ ಶ್ಲಾಘನೀಯ.ಮಾನವ ಜನ್ಮ ದೊಡ್ಡದು, ಅದನ್ನು ಸಾರ್ಥಕ ಮಾಡಬೇಕು.ಮನ ಪರಿವರ್ತನೆಯಿಂದ ಪಾನಮುಕ್ತರಾಗಿಸಲು ಸಾಧ್ಯ. ಮುಂದಿನ ದಿನದಲ್ಲಿ ನಡೆಯುವಂತಹ ಮಧ್ಯವರ್ಜನ ಶಿಬಿರ, ಯಶಸ್ವಿಯಾಗಲೆಂದರು. ಬಳಿಕ ವ್ಯವಸ್ಥಾಪನ ಸಮಿತಿಯ ರಚನೆ ಮಾಡಲಾಯಿತು.
ಸಭೆಯಲ್ಲಿ ಜನಜಾಗೃತಿ ವೇದಿಕೆಯ ವಲಯದ ಪದಾಧಿಕಾರಿಗಳು, ಗ್ರಾಮ ಸಮಿತಿಯ ಪದಾಧಿಕಾರಿಗಳು, ಯೋಜನೆಯ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ನವ ಜೀವನ ಸಮಿತಿ ಸದಸ್ಯರು ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರು ಹಾಗೂ ಜನಜಾಗೃತಿ ಆಡಳಿತ ಯೋಜನಾಧಿಕಾರಿ ಮಾಧವ ಗೌಡ ಉಪಸಿತರಿದ್ದರು. ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್ ಸ್ವಾಗತಿಸಿ, ಉಜಿರೆ ವಲಯ ಮೇಲ್ವಿಚಾರಕಿ ವನಿತಾ ವಂದಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ನಿರೂಪಿಸಿದರು.