Site icon Suddi Belthangady

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಎಸ್.ಡಿ.ಪಿ.ಐ ಪ್ರತಿಭಟನೆ

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದೆ. SDPI ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸೆ.12ರಂದು ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯ ಮೂರುಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದ ಪ್ರತಿಭಟನಾಕಾರರು ಕಾಮಾಗಾರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇತ್ರ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಮಾತನಾಡಿ, ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಆರಂಭಗೊಂಡು ವರ್ಷಗಳೇ ಕಳೆದರು ಇನ್ನು ಕಾಮಗಾರಿ ಪೂರ್ಣಗೊಳ್ಳದೆ ದಿನ ನಿತ್ಯ ಅಫಘಾತಗಳು ಸಂಭವಿಸುತ್ತಿವೆ.ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಚಿಕ್ಕಮಗಳೂರು ಮತ್ತು ದ.ಕ ಜಿಲ್ಲೆಯ ಸಂಪರ್ಕ ರಸ್ತೆಯಾಗಿರುದರಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹದಗೆಟ್ಟ ರಸ್ತೆಯಿಂದ ರಾಜ್ಯ ಸಾರಿಗೆ ಬಸ್‌ಗಳನ್ನು ಕಡಿಮೆಗೊಳಿಸಲಾಗಿದೆ. ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ. ಉಭಯ ಜಿಲ್ಲೆಗಳ ಸಂಪರ್ಕವೇ ಕಡಿತಗೊಳ್ಳುವ ಆತಂಕ ಇದೆ. ತಕ್ಷಣ ರಸ್ತೆ ನಿರ್ಮಾಣದ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಬೆಳ್ತಂಗಡಿ ಮುಖಂಡರು, ಕಾರ್ಯಕರ್ತರು, ನಾಗರೀಕರು ಪಾಲ್ಗೊಂಡಿದ್ದರು.

Exit mobile version