ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ವಾರ್ಷಿಕ ಜಮಾಬಂದಿ ಕಾರ್ಯಕ್ರಮ

0

ಉಜಿರೆ: ಉಜಿರೆ ಗ್ರಾಮ ಪಂಚಾಯತಿನ 2023-24ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ಸೆ.12ರಂದು ಗ್ರಾಮ ಪಂಚಾಯತಿನ ಸುವರ್ಣ ಸೌಧ ಸಭಾಭವನದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಅಭಿಯಂತರ ಹರ್ಷಿತ್, ಪಂಚಾಯತ್ ಸದಸ್ಯರು, ಗ್ರಾಮಸ್ಥರು ಹಾಜರಿದ್ದು ಅಭಿವೃದ್ಧಿ ಕಾರ್ಯಕ್ರಮದ ಕುರಿತು ಚರ್ಚೆ ಮಾಡಲಾಯಿತು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್ ಸ್ವಾಗತಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್.ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here