Site icon Suddi Belthangady

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಆ.12ರಂದು ಜರುಗಿತು.ಪಂದ್ಯಾಟವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಜಯರಾಜ್ ಜೈನ್, ತಾಲೂಕು ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಅಧ್ಯಕ್ಷ ರಮೇಶ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 2 ಅಧ್ಯಕ್ಷ ರವಿರಾಜ್ ಕೊರಂಜ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 2 ಅಧ್ಯಕ್ಷರಾದ ಅಖಿಲ್ ಕುಮಾರ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಾಥ್ ಬಂಗೇರ, ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ, ಪುಂಜಾಲಕಟ್ಟೆ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಚೇತನ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ನಿರಂಜನ್, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರು, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಲಾವಣ್ಯ ಶೆಟ್ಟಿ ಅವರು ಹಾಗೂ ಕುವೆಟ್ಟು ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಾಲೆಯ ದೈಹಿಕ ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮವನ್ನು ನಿರೂಪಿಸಿದರು.ಈ ಸಂದರ್ಭದಲ್ಲಿ ಕ್ರೀಡಾಕೂಟಕ್ಕೆ ಯಶಸ್ವಿಗೆ ಸಹಕರಿಸ ದಾನಿಗಳನ್ನು ಗೌರವಿಸಲಾಯಿತು.

Exit mobile version