ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ, ಮುಂಡಾಜೆ ವಲಯ, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ್ ಮತ್ತು ರೇಂಜರ್ಸ್ ವಿಭಾಗ, ಜ್ಯೂನಿಯರ್ ರೆಡ್ ಕ್ರಾಸ್ ಮುಂಡಾಜೆ ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಸೆ.12ರಂದು ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಮಾಜಿ ಅಧ್ಯಕ್ಷ ಅಡೂರು ವೆಂಕಟ್ರಾಯ ಇವರು ನೆರವೇರಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಜ್ವಾಲಿ ಡಿಸೋಜಾ ಮಾತನಾಡಿ, ವ್ಯಸನ ಮುಕ್ತ ಸಮಾಜ ನಮ್ಮೆಲ್ಲರ ಹೊಣೆಯಾಗಲಿ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿದ್ದ ಪತ್ರಕರ್ತ ಹಾಗೂ ಜನಜಾಗೃತಿ ವೇದಿಕೆ ತಾಲೂಕು ಸಮಿತಿ ಸದಸ್ಯ ಅಶ್ರಫ್ ಆಲಿಕುಂಞಿ ಮುಂಡಾಜೆ ಇವರು ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಕರೆ ನೀಡಿ, ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಮುಂಡಾಜೆ ವಲಯಾಧ್ಯಕ್ಷ ನಾಮದೇವ ರಾವ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ದನ ಮಾಚಾರು, ಸೇವಾ ಪ್ರತಿನಿಧಿಗಳಾದ ಸರಿತಾ, ದಿಶಾ ಜಿನೇಶ್, ಚೇತನಾ ಚಾರ್ಮಾಡಿ ಇವರುಗಳು ಉಪಸ್ಥಿತರಿದ್ದರು.
ಕಾಲೇಜಿನ ರೇಂಜರ್ ಲೀಡರ್ ವಸಂತಿ ಕಾರ್ಯಕ್ರಮ ನಿರೂಪಿಸಿದರು. ಜ್ಯೂನಿಯರ್ ರೆಡ್ ಕ್ರಾಸ್ ಮುಖ್ಯಸ್ಥ ಪುರುಷೋತ್ತಮ ಶೆಟ್ಟಿ ಸ್ವಾಗತಿಸಿ, ರಾ.ಸೇ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ವಂದಿಸಿದರು.