ಬೆಳ್ತಂಗಡಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ಜರಗಿದ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ ಸಮಾರಂಭ ನಡೆಯಿತು.
ಕಲಾವಿದ ಜಯರಾಮ್ ಮುಂಡಾಜೆಯವರು ಜನಪದ ಕುಣಿತಗಳು ಮತ್ತು ಹಾಡುಗಳ ಬಗ್ಗೆ ಹಾಗೂ ಆಕಾಶವಾಣಿ ಕಲಾವಿದೆ ಅಕ್ಷತ ರಾಜ್ ಪೆರ್ಲ ನಾಟಕ ರಚನೆ ಬಗ್ಗೆ ಕಮ್ಮಟವನ್ನು ನಡೆಸಿಕೊಟ್ಟರು.ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತುಳು ಸಂಘದ ಸಂಯೋಜಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು. ಕಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಮಾಣ ಪತ್ರವನ್ನು ನೀಡಲಾಯಿತು.