



ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಸೆಪ್ಟೆಂಬರ್ 14ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕ ವಂದನೀಯ ಡಾ.ಸ್ಟೇನಿ ಗೋವಿಯಸ್ ರವರು ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಗಳ ಜೊತೆಗೆ ವ್ಯಕ್ತಿತ್ವ ವಿಕಾಸನ ಮಾಡುವ ಒಂದು ಉತ್ತಮ ವೇದಿಕೆಯಾಗಿದೆ ಎಂದು ನುಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜು ಪ್ರಾಂಶುಪಾಲ ಪ್ರೊ.ಅಲೆಕ್ಸ್ ಐವನ್ ಸಿಕ್ವೇರರವರು ಮಾತನಾಡಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಾಡಿರುವ ಸಾಧನೆಯ ಬಗ್ಗೆ ವಿವರಿಸಿ ಶುಭಹಾರೈಸಿದರು.



ಯೋಜನಾಧಿಕಾರಿ ಪ್ರಶಾಂತ್ ರವರು ಮುಂದಿನ ದಿನಗಳಲ್ಲಿ ಆಯೋಜಿಸಲ್ಪಡುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಯೋಜನಾಧಿಕಾರಿಗಳಾದ ಜೀವ ವಿ.ಸಿ ಮತ್ತು ಸಹ ಯೋಜನಾಧಿಕಾರಿಗಳಾದ ಕು.ದಿವ್ಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಸ್ವಯಂ ಸೇವಕಿಯಾದ ಸಂಪ್ರೀತರವರು ನಿರೂಪಿಸಿ, ಸ್ವಯಂ ಸೇವಕ ವಿಲಾಸ್ ರವರು ಸ್ವಾಗತಿಸಿ, ನಯನರವರು ವಂದಿಸಿದರು.









