ಮಚ್ಚಿನ: ಏ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಮಚ್ಚಿನ ಮತ್ತು ಕುದ್ರಡ್ಕ ಜ್ಞಾನವಿಕಾಸ ಕೇಂದ್ರ, ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್, ಮಚ್ಚಿನ ಗುರುನಾರಾಯಣ ಸೇವಾ ಸಂಘ, ಮಚ್ಚಿನ ವಲಯ ತುಳು ಶಿವಳ್ಳಿ ಸಭಾ, ಮಚ್ಚಿನ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಭವನ ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೆ.15ರಂದು ನಡೆಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ರುಕ್ಮಿಣಿರವರು ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮೂಡಬಿದ್ರೆ ಶ್ರೀ ಮಹಾವೀರ ಕಾಲೇಜು ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ ಇವರು ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ನಾರಾಯಣ ಪೂಜಾರಿ, ಮಚ್ಚಿನ ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ, ಮಚ್ಚಿನ ವಲಯ ತುಳು ಶಿವಳ್ಳಿ ಸಭಾದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಮಡಂತ್ಯಾರು ವಲಯ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷ ಜಯ ಪೂಜಾರಿ, ಮಂಗಳೂರು ಕುಂಟಿಗಾನ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಡಾ.ಪುನೀತ್, ಮಚ್ಚಿನ ಒಕ್ಕೂಟದ ಅಧ್ಯಕ್ಷೆ ಸುಧಾ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಹರ್ಷ ಬಳ್ಳಮoಜ, ಕುದ್ರಡ್ಕ ಸೇವಾಪ್ರತಿನಿಧಿ ನಂದಿನಿ, ಕುದ್ರಡ್ಕ ಜ್ಞಾನ ವಿಕಾಸ ಸದಸ್ಯರು ಮತ್ತು ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಡಂತ್ಯಾರು ವಲಯದ ಮೇಲ್ವಿಚಾರಕ ವಸಂತ ಕುಮಾರ್ ನಿರೂಪಿಸಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿ, ಮಚ್ಚಿನ ಸೇವಾಪ್ರತಿನಿಧಿ ಪರಮೇಶ್ವರ್ ಧನ್ಯವಾದ ನೀಡಿದರು.