Site icon Suddi Belthangady

ಪುಂಜಾಲಕಟ್ಟೆ: ಬೆಳ್ತಂಗಡಿ-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಆ‌ರ್.ಎ.ಎಫ್ ಪೊಲೀಸರಿದ್ದ ಲಾರಿ ಪಲ್ಟಿ- ಇಬ್ಬರಿಗೆ ಗಾಯ

ಬೆಳ್ತಂಗಡಿ: ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್‌(ಆರ್‌ಎಎಫ್)ನ ಲಾರಿ ಮಗುಚಿ ಬಿದ್ದ ಘಟನೆ ಬೆಳ್ತಂಗಡಿ-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ.

ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಮತ್ತೋರ್ವ ಸಿಬ್ಬಂದಿ ಸಾಂತಪ್ಪ ನಾಯಕ್ ರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪುಂಜಾಲಕಟ್ಟೆ ಪೊಲೀಸರು ತಿಳಿಸಿದ್ದಾರೆ.

Exit mobile version