Site icon Suddi Belthangady

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ||ಡಿ.ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಹೇಮಾವತಿ ವಿ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 30 ಲಕ್ಷ ರೂ. ಮೌಲ್ಯದ 2 ಬಿಪಿಎಲ್ ಲೋವೆನ್‌ಸ್ಪೈನ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಡಿ.ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

9 ಹಾಸಿಗೆಗಳ ಸುಸಜ್ಜಿತ ಐಸಿಯು ಹೊಂದಿರುವ ಆಸ್ಪತ್ರೆಯು ಈಗಾಗಲೇ 6 ವೆಂಟಿಲೇಟರ್‌ಗಳನ್ನು ಹೊಂದಿದ್ದು, ಈಗ ಒಟ್ಟು 8 ವೆಂಟಿಲೇಟರ್‌ಗಳಿವೆ. ಹೃದಯಾಘಾತ, ಸ್ಟ್ರೋಕ್, ಉಸಿರಾಟದ ಸಮಸ್ಯೆ ಮುಂತಾದ ತುರ್ತು ಸಂದರ್ಭದಲ್ಲಿ ಈ ಅತ್ಯಾಧುನಿಕ ವೆಂಟಿಲೇಟರ್‌ಗಳು ಬಹಳ ಉಪಯುಕ್ತವಾಗಲಿದೆ. ಇದು ಉತ್ತಮ ಗುಣಮಟ್ಟದ ಉಸಿರಾಟವನ್ನು ಒದಗಿಸುತ್ತದೆ. ಇದರಲ್ಲಿ ಅಳವಡಿಸಿರುವ ಪ್ಯಾರಾಮೀಟರ್ ಹಾಗೂ ರೋಗಿಯಿಂದ ಸಂಪರ್ಕ ಕಳೆದುಕೊಂಡಾಗ ಎಚ್ಚರಿಸುವ ಸೈರನ್ ರೋಗಿಗೆ ಉಸಿರಾಟದಲ್ಲಿ ವ್ಯತ್ಯಯವಾಗದಂತೆ ನಿಗಾ ವಹಿಸುತ್ತದೆ. ಹೊಸ ತಂತ್ರಜ್ಞಾನ ಹೊಂದಿರುವ ಈ ವೆಂಟಿಲೇಟರ್ ವಯಸ್ಕರು, ಮಕ್ಕಳು ಮತ್ತು ನವಜಾತ ಶಿಶುಗಳಿಗೆ ಹೊಂದಾಣಿಕೆಯಾಗಬಲ್ಲದು. ಈ ವೆಂಟಿಲೇಟರ್ ಪೋರ್ಟೆಬಲ್ ಆಗಿದೆ. ಅಗತ್ಯ ಬಿದ್ದಾಗ ಆಂಬುಲೆನ್ಸ್‌ಗಳಲ್ಲೂ ಅಳವಡಿಸಲು ಸಾಧ್ಯವಿದೆ. ಮಂಗಳೂರಿನ ಬಳಿಕ ಈ ಅತ್ಯಾಧುನಿಕ ವೆಂಟಿಲೇಟರ್ ಹೊಂದಿರುವ ಏಕೈಕ ಆಸ್ಪತ್ರೆ ಇದಾಗಿದೆ.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಸ್ವಾಗತಿಸಿದರು. ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದೇವೇಂದ್ರ ಕುಮಾರ್ ಪಿ, ಮುಖ್ಯ ವೈದ್ಯಾಧಿಕಾರಿ ಡಾ.ಸಾತ್ವಿಕ್ ಜೈನ್, ವೈದ್ಯರು, ದಾದಿಯರು, ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version