ಉಜಿರೆ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಸಮೂಹ ಸಂಪನ್ಮೂಲ ಕೇಂದ್ರ ಹಳೆಪೇಟೆ- ಉಜಿರೆ ವಲಯದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸೆ.12ರಂದು ದೊಂಪದಪಲ್ಕೆ ಸ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆದು ಪೋಷಿಸಲುಇದು ಸೂಕ್ತವಾದ ವೇದಿಕೆ” ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ದಿನೇಶ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ನಿವೃತ್ತ ಯೋಜನಾಧಿಕಾರಿ ಹಾಗೂ ಪ್ರತಿಭಾ ಕಾರಂಜಿ ಸಮಿತಿಯ ಸಂಚಾಲಕ ಸೀತಾರಾಮ್ ಶೆಟ್ಟಿ ಮಾತನಾಡಿ “ಮಕ್ಕಳ ಪ್ರತಿಭೆಯೇ ಅವರ ಶಕ್ತಿ. ಅದನ್ನು ಪೋಷಿಸುವುದು ನಮ್ಮ ಕರ್ತವ್ಯ “ಎಂದರು. ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಶಾಲೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ಸಮನ್ವಯ ಅಧಿಕಾರಿ ಮೋಹನ್ ಕುಮಾರ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭವನ್ನು ಹಾರೈಸಿದರು.
ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ಉಪ ಪ್ರಾಂಶುಪಾಲ ಶಮಿವುಲ್ಲಾ, ಬೆಳ್ತಂಗಡಿ ತಾಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಸುರೇಶ್ ಮಾಚಾರ್, ಪ್ರತಿನಿಧಿ ಜ್ಯೋತಿ ಉಪಸ್ಥಿತರಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿವಿಧ ಸ್ಪರ್ಧೆಗಳು ಸುಲಲಿತವಾಗಿ ನಡೆದು ವಿಜೇತರಿಗೆ ಸೇವಂತಿ, ಶಿಕ್ಷಕಿ ಮುಂಡತ್ತೋಡಿ ಅವರ ನೇತೃತ್ವಲ್ಲಿ ಶಾಲಾ ಎಸ್‌ಡಿಎಂಸಿಯವರು ಬಹುಮಾನ ನೀಡಿ ಪುರಸ್ಕರಿಸಿದರು. ಗುರುದೇವ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಶಾಲಾ ಮುಖ್ಯ ಶಿಕ್ಷಕ ಸುರೇಶ್ ಆಚಾರ್ ಸ್ವಾಗತಿಸಿ ಸಹ ಶಿಕ್ಷಕಿ ನಿರ್ಮಲ ವಂದಿಸಿದರು.ಶಿಕ್ಷಕಿ ಸೌಮ್ಯ ನಾಯಕ್ ನಿರೂಪಿಸಿದರು.ಊರ ವಿದ್ಯಾಭಿಮಾನಿಗಳು, ಎಸ್ ಡಿ ಎಂ ಸಿ ಹಾಗೂ ಶಿಕ್ಷಕರ ಸಹಕಾರ ನೀಡಿದರು.